ಜವಾಹರ್ ಲಾಲ್ ನೆಹರು ಜವಾಹರರಿಗೆ ಮೊದಲಿನಿಂದಲೂ ಮಕ್ಕಳೆಂದರೆ ಬಹಳ ಪ್ರೀತಿ.ಮಕ್ಕಳೊಡನೆ ಆಟವಾಡುವುದೆಂದರೆ ಆನಂದ. ಸ್ವತಂತ್ರ ಭಾರತದ ಪ್ರಧಾನಮಂತ್ರಿಯಾಗಿ ದಿನವಿಡೀ ದುಡಿತವಿದ್ದಾಗಲೂ ಅವರು ಮಕ್ಕಳೊಡನೆ ಆಡುವ ಪ್ರಸಂಗ ತಪ್ಪಿಸುತ್ತಿರಲಿಲ್ಲ. ಯಾವುದೇ ಸಭೆಗೆ ಹೋಗಿರಲಿ, ಎಷ್ಟೇ ಅವಸರದ ಕಾರ್ಯಕ್ರಮವಿರಲಿ ಅವರು ಮಕ್ಕಳನ್ನು ನೋಡಿದ ಕೂಡಲೆ ಎತ್ತಿ ಮುದ್ದಾಡುತ್ತಿದ್ದರು. ‘‘ನಿಜವಾದ ಜವಾಹರರನ್ನು ನೋಡಬೇಕಾದರೆ ಅವರು ಮಕ್ಕಳೊಂದಿಗೆ ಇರುವಾಗ ನೋಡಬೇಕು. ಮಕ್ಕಳಂತೆಯೇ ಮಾತನಾಡಿ, ಅವರ ಹಾಗೆಯೇ ಆಟವಾಡಿ ನಲಿದು ಆನಂದಪಡುತ್ತಾರೆ’’ ಎಂದು ಅವರ ತಂಗಿ ಶ್ರೀಮತಿ ವಿಜಯಲಕ್ಷ್ಮಿ ಪಂಡಿತರು ಹೇಳಿದ್ದಾರೆ. ನವೆಂಬರ್ 14 ನಮ್ಮ ದೇಶದ ಒಬ್ಬ ಮಹಾಪುರುಷರಾದ ಪಂಡಿತ ಜವಾಹರ್‌ಲಾಲ್ ನೆಹರು ಅವರ ಜನ್ಮದಿನ. ಅಂದು ಭಾರತದಲ್ಲೆಲ್ಲ ‘ಮಕ್ಕಳ ದಿನ’ ಎಂದು ಸಂಭ್ರಮದಿಂದ ಪ್ರತಿವರುಷ ಆಚರಿಸುತ್ತೇವೆ. ಜವಾಹರರನ್ನು ಮಕ್ಕಳು ‘ಚಾಚಾ ನೆಹರೂ’ ಎಂದು ಪ್ರೀತಿ-ಗೌರವಗಳಿಂದ ಕರೆಯುತ್ತಾರೆ. ಚಾಚಾ ಎಂದರೆ ಚಿಕ್ಕಪ್ಪ. ನೆಹರು ಅವರ ಪೂರ್ವಜರ ಹೆಸರು ‘ನೆಹರು’ ಆಗಿದ್ದಿರಲಿಲ್ಲ. ಅವರ ಪೂರ್ವಜರು ಕಾಶ್ಮೀರದಲ್ಲಿದ್ದರು. ಅವರಿಗೆ ‘ರಾಜಕೌಲ’ ಎಂಬ ಹೆಸರಿತ್ತು. ಪಂಡಿತ ರಾಜಕೌಲರು ಸಂಸ್ಕೃತ-ಫಾರಸೀ ಭಾಷೆಗಳಲ್ಲಿ ವಿದ್ವಾಂಸರಾಗಿದ್ದರು. ಕ್ರಿ.ಶ. 1716ರಲ್ಲಿ ದಿಲ್ಲಿಯ ಮೊಗಲದೊರೆ ಫರುಕ್ಸಿಯರನು ಕಾಶ್ಮೀರಕ್ಕೆ ಭೆಟ್ಟಿ ಕೊಟ್ಟಾಗ ಪಂಡಿತ ರಾಜಕೌಲರನ್ನು ದಿಲ್ಲಿಗೆ ಕ...
EDUCATION | ENTERTAINMENT | INFOTAINMENT